ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಲಾಗಿದೆ. ಕಡೂರು ತಾಲೂಕಿನ ವಡರೇಹಳ್ಳಿ ತಾಂಡ್ಯದ ನಿವಾಸಿ ರಂಜಿತಾ ಬಾಯಿ (22) ಮೃತ ಮಹಿಳೆ.
ಇದನ್ನೂ ಓದಿ; ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?

ಸಿಬ್ಬಂದಿಯ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾಳೆಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆಯ ಆವರಣದಲ್ಲಿ ಕೆಲ ಕಾಲ ಪ್ರತಿಭಟಿಸಿದ ಘಟನೆ ನಡೆದಿದೆ. ಶನಿವಾರ ಮಧ್ಯಾಹ್ನ ಹೆರಿಗೆಯಾಗಿದ್ದು, ರಾತ್ರಿ ವೇಳೆ ರಂಜಿತಾ ಬಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಗ್ಗೆ ಮಾಹಿತಿ ನೀಡಿದರೂ ಅಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ ಸಕಾಲದಲ್ಲಿ ವೈದ್ಯರು ಬಂದು ತಪಾಸಣೆ ಮಾಡಿಲ್ಲ, ಹೆರಿಗೆ ಮಾಡಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಇದನ್ನೂ ಓದಿ; ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
ಬಾಣಂತಿಯ ಸಾವಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಬಂಧಿಕರು ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ವೈದ್ಯಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದರಿಂದ ಸಂಬಂಧಿಕರು ಪ್ರತಿಭಟನೆ ಕೈಬಿಟ್ಟಿದ್ದಾರೆಂದು ತಿಳಿದು ಬಂದಿದೆ.
ಶೃಂಗೇರಿ: ಹೆದ್ದಾರಿ ಕಾಮಗಾರಿ ವಾಹನ ಗುದ್ದಿ ಸ್ಥಳೀಯ ಬೈಕ್ ಸವಾರನ ಕಾಲು ಮುರಿತ
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಹೆದ್ದಾರಿ ಕಾಮಗಾರಿಯ ವಾಹನವೊಂದು ಬೈಕ್ ಸವಾರನಿಗೆ ಗುದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.












