
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಹಾವು ಕಚ್ಚಿ ಮಹಿಳೆ ಓರ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಸೀತೂರು ಗ್ರಾಪಂ ವ್ಯಾಪ್ತಿಯ ಕಮಲಾಪುರ ಗ್ರಾಮದಲ್ಲಿ ನಡೆದಿದೆ. ಕೋತಳ್ಳಿಯ ಶಿವಕುಮಾರಿ (37) ಹಾವು ಕಚ್ಚಿ ಮೃತಪಟ್ಟ ಮಹಿಳೆ.
ಇದನ್ನೂ ಓದಿ: ವಿಂಡೋಸ್ 10 ಬಗ್ಗೆ ಡೊಡ್ಡ ಘೋಷಣೆ; ಏನದು..?

ಭಾನುವಾರ ಮಧ್ಯಾಹ್ನ ಸುಮಾರು 12 ಗಂಟೆಗೆ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದಾಗ ಕಾಲಿಗೆ ಹಾವು ಕಚ್ಚಿದೆ. ತಕ್ಷಣ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಉಚಿತ ಎಲ್‌ಪಿಜಿ ಸಂಪರ್ಕ | ಅರ್ಜಿ ಸಲ್ಲಿಕೆ ಹೇಗೆ?













