
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ನ ಹಿಂಬದಿ ಕುಳಿತ್ತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ. ಎಸ್. ಜಿ. ಕೊಪ್ಪಲು ಗ್ರಾಮದ ಚೋಳಚಮ್ಮ (55) ಮೃತ ದುರ್ದೈವಿ.
ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ

ಯರೇಹಳ್ಳಿ ಗೇಟ್‌ನಿಂದ ಕಡೂರಿಗೆ ಬರುವಾಗ ಪಟ್ಟಣದ ಕನಕ ವೃತ್ತದ ಬಳಿಯಲ್ಲಿ ಕಡೂರು ಪುರಸಭೆಯ ಟ್ರ್ಯಾಕ್ಟರ್ ಹಿಂಬದಿಯಿಂದ ಗುದ್ದಿದ್ದ ಪರಿಣಾಮ ಬೈಕ್ ಸವಾರರು ಕೆಳಗೆ ಬಿದ್ದಿದ್ದರೆ. ಚೋಳಚಮ್ಮ ಅವರ ತಲೆಗೆ ಪೆಟ್ಟು ಬಿದ್ದು ತೀವ್ರರಕ್ತಸ್ರಾವವಾಗಿ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಬೈಕ್ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!













