ಬೀರೂರು: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಬೈಕ್ನಲ್ಲಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಬಳ್ಳಿಗನೂರು ಗ್ರಾಮದಲ್ಲಿ ನಡೆದಿದೆ. ಸರಸ್ವತಿಪುರದ ವಾಸಿ ಗೌರಮ್ಮ(63) ಮೃತ ವಹಿಳೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ರಿಲೀಫ್; ಏನದು, ಮಿಸ್ ಮಾಡ್ದೆ ಈ ಸುದ್ದಿ ಓದಿ

ಗೌರಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ನಾಟಿ ಔಷಧಿ ತರಲು ಲಿಂಗದಹಳ್ಳಿಗೆ ತನ್ನ ಪತಿ ಶಿವಣ್ಣ ಹಾಗೂ ಮಗ ರಾಜು ಅವರೊಂದಿಗೆ ಬೈಕ್ನಲ್ಲಿ ಹೊರಟಿದ್ದರು. ಬೀರೂರು ಮಾರ್ಗವಾಗಿ ಲಿಂಗದಹಳ್ಳಿಗೆ ಹೋಗುವಾಗ ಹೂವಿನಹಳ್ಳಿ ಕ್ರಾಸ್ ಸಮೀಪ ಲಿಂಗದಹಳ್ಳಿ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಚಾಲಕ ರಾಜು, ಗೌರಮ್ಮ ಮತ್ತು ಶಿವಣ್ಣ ಗಾಯಗೊಂಡಿದ್ದಾರೆ. ಆಸ್ಪತ್ರೆಗೆ ತರುವ ಮಾರ್ಗ ಮಾಧ್ಯದಲ್ಲಿಯೇ ಗೌರಮ್ಮ ಮೃತಪಟ್ಟಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೀರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಇನ್ಮುಂದೆ ಮೊಬೈಲ್ ನಲ್ಲೇ ಸಿಗಲಿದೆ ಹಳೆಯ ಪಹಣಿ












