ಮಡಿಕೇರಿ: (ನ್ಯೂಸ್ ಮಲ್ನಾಡ್ ವರದಿ) ವಿರಾಜಪೇಟೆ – ಪೆರಂಬಾಡಿ ಬಳಿ ಪುರಸಭೆಯ ಕಸ ಸಾಗಿಸುವ ವಾಹನ ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ್ದು ಮತ್ತಿಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ.
ರಿಕ್ಷಾದಲ್ಲಿ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇವರ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ ಸುಲೋಚನ ಅವರನ್ನು ಮೈಸೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿಮಧ್ಯೆ ಮೃತಪಟ್ಟರೆನ್ನಲಾಗಿದೆ. ಅಮೃತ ಹಾಗೂ ಪದ್ಮನಾಭ ಅವರಿಗೆ ಗಂಭೀರ ಗಾಯ ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

















