ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡಿನಲ್ಲಿ ಮಂಗಗಳ ಹಾವಳಿ ಮಿತಿಮೀರಿದೆ. ತಾಲೂಕಿನ ಶಾಂತವೇರಿ ಗ್ರಾಮದಲ್ಲಿ ಮಂಗ ದಾಳಿಯಿಂದ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ಮನೆಯೊಳಗೆ ಕೆಲಸ ಮಾಡುತ್ತಿದ್ದ ವೇಳೆ ಮಂಗ ಆಕಸ್ಮಿಕವಾಗಿ ನುಗ್ಗಿ ಮಹಿಳೆಯ ಕೈ ಹಾಗೂ ಮುಖದ ಭಾಗಕ್ಕೆ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಗಾಯಗೊಂಡ ಮಹಿಳೆಯನ್ನ ತಕ್ಷಣ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗ್ರಾಮಸ್ಥರು ಮಂಗಗಳ ಕಾಟದಿಂದ ಕಂಗಾಲಾಗಿದ್ದಾರೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್












