ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡರ ಗಲಾಟೆ: ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯ ಕಾರ್ಯದರ್ಶಿ ಚೇತನಾ ಮತ್ತು ಅವರ ಪತಿಯ ಮೇಲೆ ಸ್ವಪಕ್ಷದ ಮುಖಂಡ ರಾಹಿಲ್ ಷರೀಫ್ ನಡೆಸಿರುವ ಹಲ್ಲೆ ಪ್ರಕರಣ ರಾಜ್ಯ ಮಟ್ಟದಲ್ಲಿ ಅಲ್ಲದೆ ಈಗ ರಾಷ್ಟ್ರ ಮಟ್ಟಕ್ಕೂ ತಲುಪಿದೆ.


ನ್ನೂ ಓದಿ: ಈ ಕುಟುಂಬಗಳಿಗೆ ಎಲ್​ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ


ಹೌದು, ಚಿಕ್ಕಮಗಳೂರು ನಗರದ ಕಾಂಗ್ರೆಸ್ ನಾಯಕಿ ಚೇತನಾ ಎಂಬವರು ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಷರೀಫ್ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

ಪತ್ರದಲ್ಲೇನಿದೆ?:
ಮನೆ ಖಾಲಿ ಮಾಡಿಸಿದ್ದಕ್ಕೆ ಫೆಬ್ರವರಿ 28ರ ರಾತ್ರಿ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ಮನೆಗೆ ನುಗ್ಗಿ ರಾಹಿಲ್ ಷರೀಫ್ ಹಲ್ಲೆ ಮಾಡಿದ್ದಾರೆ. ಬಳಿಕ ರಾಹಿಲ್ ಷರೀಫ್ ನೇಪಾಳಕ್ಕೆ ಪರಾರಿಯಾಗುವ ವೇಳೆ ರಾಜಸ್ಥಾನದ ಅಜ್ಮೀರ್ ನಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದ್ರೆ, ಬಂಧನದ ಬಳಿಕ ಆರೋಪಿ ರಾಹಿಲ್ ನನ್ನು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕಾಗಿ ಸಮಗ್ರ ತನಿಖೆಯಾಗುತ್ತಿಲ್ಲ. ಆಸ್ಪತ್ರೆಗೆ ದಾಖಲು ಮಾಡಿ ರಕ್ಷಣೆ ಮಾಡಲಾಗುತ್ತಿದೆ. ರಾಹಿಲ್ ಷರೀಫ್ ಮೊಬೈಲ್ ನಲ್ಲಿ ಹಲವು ಹಿಂದೂ ಯುವತಿಯರ ಅಶ್ಲೀಲ ವಿಡಿಯೋಗಳು ಇವೆ. ಹಲವು ಹಿಂದೂ ಹೆಣ್ಣು ಮಕ್ಕಳನ್ನ ಬಳಸಿಕೊಂಡು ಲವ್ ಜಿಹಾದ್ ನಡೆಸಲು ಯತ್ನ ಮಾಡಿದ್ದಾನೆ. ಸಮಗ್ರ ತನಿಖೆ ಕೇಂದ್ರ ಸರ್ಕಾರ ನಡೆಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.


ನ್ನೂ ಓದಿ: ಮಾ.18 ರಿಂದ SSLC ಪರೀಕ್ಷೆ ಆರಂಭ; ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ


ತನಗೂ ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಪತ್ರದಲ್ಲಿ ಉಲ್ಲೇಖಿಸಿರುವ ಚೇತನಾ, ಈ ಹಿಂದೆಯೂ ಹಲವಾರು ಪ್ರಕರಣದಲ್ಲಿ ರಾಹಿಲ್ ಹಿಂದೂ ಯುವತಿಯ ಮನೆಯಲ್ಲಿ ಸಿಕ್ಕಿಬಿದ್ದದ್ದ. ಹೀಗಾಗಿ ಹಿಂದೂ ಹೆಣ್ಣು ಮಕ್ಕಳ ರಕ್ಷಣೆ ಮಾಡಿ ಎಂದಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.