ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿನ ಬಾಳೂರು ಎಸ್ಟೇಟ್ನಲ್ಲಿ ಕಳೆದ ರಾತ್ರಿ ಬಿರುಗಾಳಿ ಸಹಿತ ಮಳೆ ಸಂಭವಿಸಿದ್ದು, ತೋಟ ಕಾರ್ಮಿಕರ ಲೈನ್ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಘಟನೆ ನಡೆದಿದೆ.
ಇದನ್ನೂ ಓದಿ: 60 ಪರ್ಸೆಂಟೇಜ್ ತೆಗೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ

ಮನೆಯೊಳಗೆ ನಿದ್ದೆ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಸುನಂದಾ ಮರದ ಬಿದ್ದ ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣವೇ ಬಣಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರ ಸ್ಥಿತಿ ಚಿಂತಾಜನಕವಾಗಿದೆ.
ಬಿರುಗಾಳಿ ಮಳೆಯ ತೀವ್ರತೆಗೆ ಎಸ್ಟೇಟ್ನ ಹಲವು ಭಾಗಗಳಲ್ಲಿ ಹಾನಿಯಾಗಿದ್ದು, ಮರಗಳು ಹಾಗೂ ತಾಳೆಗಳು ನೆಲಕ್ಕುರುಳಿವೆ. ಸ್ಥಳೀಯ ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದು, ಇದೀಗ ಸುರಕ್ಷತೆ ಕುರಿತು ಚರ್ಚೆಗಳು ಆರಂಭವಾಗಿವೆ.
ಇದನ್ನೂ ಓದಿ: ಆಸ್ತಿ ಖರೀದಿ, ಮಾರಾಟಗಾರರಿಗೆ ಭರ್ಜರಿ ಸುದ್ದಿ; ಏನದು? ಇಲ್ಲಿದೆ ನೋಡಿ
ಈ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟ:
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಲಿ ಗ್ರಾಮದಲ್ಲಿ ಮಳೆಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿರುವ ಘಟನೆ ನಡೆದಿದೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಭಾರಿ ಶಬ್ದದೊಂದಿಗೆ ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿದ್ದು, ಸಬ್ಲಿ ಗ್ರಾಮದಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದಾರೆ. ಇನ್ನು ಈ ಘಟನೆ ಕುರಿತು ಗ್ರಾಮಸ್ಥರು ಮೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)

ಇದನ್ನೂ ಓದಿ: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ವಿವಿಧ ಯೋಜನೆಯಲ್ಲಿ ಶೇ.90ರಷ್ಟು ಸಹಾಯಧನ












