ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ

ಕಳೆದ ಶುಕ್ರವಾರ (05/12/2025) ವಿದ್ಯಾರಣ್ಯಪುರ ಗ್ರಾಮದ ಕೇರೊಡಿ ಬಳಿ ಭವಾನಿ ಅವರು ಹೋಗುವಾಗ ರಾತ್ರಿ ಸುಮಾರು 08-00 ಗಂಟೆ ಸುಮಾರಿಗೆ ಹಿಂದಿನಿಂದ ಬಂದ ಬೈಕ್ ಸವಾರ ಭವಾನಿ ಅವರ ಮಾಂಗಲ್ಯ ಸರವನ್ನು ಅರ್ಧ ಭಾಗದಷ್ಟು ಕಿತ್ತುಕೊಂಡು ಹೋಗಿದ್ದಾನೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೆಣಸೆ ಸಮೀಪ ಮನೆಗೆ ನುಗ್ಗಿ ಕಳ್ಳತನ:
ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಸಮೀಪ ನಿನ್ನೆ ರಾತ್ರಿ (08.12.2025) ಸುಮಾರು 9 ಗಂಟೆ ಸಮಯದಲ್ಲಿ ನಡೆದಿದೆ. ಮೆಣಸೆಯ ಮಂಜುನಾಥ್ ಎಂಬುವವರ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿರುವ ಕಳ್ಳರು ಚಿನ್ನ, ಬೆಳ್ಳಿ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನ ಕದ್ದು ಪರಾರಾರಿಯಾಗಿದ್ದಾರೆ.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ ನೋಂದಣಿ ಪ್ರಾರಂಭ; ಏನಿದು ಪರೀಕ್ಷಾ ಪೇ ಚರ್ಚಾ
ಇನ್ನು ಘಟನೆ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.












