ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಲಾಡ್ಜ್ ವೊಂದರಲ್ಲಿ ಯುವತಿಯೊಬ್ಬಳ ಬರ್ಬರ ಹತ್ಯೆ ನಡೆದಿರುವ ಘಟನೆ ಶಿವಮೊಗ್ಗದ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ನಲ್ಲಿ ನಡೆದಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!

ಕಳೆದ ಸೋಮವಾರ (ಏ.1) ರಂದು ಲಾಡ್ಜ್ ಗೆ ಬಂದಿದ್ದ ಯುವಕ-ಯುವತಿ ರೂಂ ಬಾಡಿಗೆ ಪಡೆದಿದ್ದರು. ಲಾಡ್ಜ್ ನಲ್ಲಿ ತಂಗಿದ್ದಾಗ ಜೊತೆಗೆ ಇದ್ದ ಯುವಕನೇ ಯುವತಿಯ ಕತ್ತು ಸೀಳಿ ಕೊಲೆ ಮಾಡಿ ಓಡಿ ಹೋಗಿದ್ದಾನೆ. ಲಾಡ್ಜ್ ಸಿಬ್ಬಂದಿ ರೂಮಿಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತಳ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ತೀರ್ಥಹಳ್ಳಿ ಪೊಲೀಸರು ಶೋಧ ನಡೆಸಿದ್ದಾರೆ.
ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಕೊಟ್ಟಿಗೆಹಾರ: ದಾಖಲೆ ತೋರಿಸಿದರೂ ಹಣ ವಶಕ್ಕೆ ಪಡೆದ ಅಧಿಕಾರಿಗಳು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದ್ದು, ಈ ಬೆನ್ನಲ್ಲೇ ದೇವತಾ ಕಾರ್ಯಕ್ಕೆ ಹಣ ಕೊಂಡೊಯ್ಯುತ್ತಿದ್ದ ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇಕ್ಕಟ್ಟಿಗೆ ಸಿಲುಕಿದ ಪ್ರಸಂಗವೊಂದು ನಡೆದಿದೆ.
ಇದನ್ನೂ ಓದಿ; ಜನಸಾಮಾನ್ಯರಿಗೆ ಗುಡ್ ನ್ಯೂಸ್; ಗಗನಕ್ಕೇರಿದ್ದ ಅಕ್ಕಿ ದರ ಇಳಿಕೆ
ಇದನ್ನೂ ಓದಿ; ಯಾವುದೇ ಪರೀಕ್ಷೆ ಇಲ್ಲದೇ ಅಂಚೆ ಪೇಮೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 47 ಹುದ್ದೆಗೆ ಅರ್ಜಿ ಆಹ್ವಾನ
ನೀತಿ ಸಂಹಿತೆ ಜಾರಿಯಲ್ಲಿದ್ದು, ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಆದರೆ ಈ ನಿಯಮವೇ ಜನಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಚುನಾವಣಾ ಅಧಿಕಾರಿಗಳ ಧೋರಣೆಯಿಂದ ಸಾರ್ವಜನಿಕರು ಪರದಾಟ ಅನುಭವಿಸುವಂತಾಗಿದೆ.













