ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ 153 ಹುದ್ದೆಗೆ ಅರ್ಜಿ ಆಹ್ವಾನ; SSLC, PUC ವಿದ್ಯಾರ್ಹತೆ

ಮೃತರನ್ನು ಸುಶೀಲಮ್ಮ (47) ಎಂದು ಗುರುತಿಸಲಾಗಿದೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಕಾಡಾನೆ ಏಕಾಏಕಿ ದಾಳಿ ಮಾಡಿ ಸೊಂಡಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಎರಡು ತಿಂಗಳ ಅಂತರದಲ್ಲಿ ನಾಲ್ಕನೇ ಸಾವು ಇದಾಗಿದೆ.
ಇದನ್ನೂ ಓದಿ: 10 ಗ್ರಾಂ ಬಂಗಾರದ ದರ 1,200 ರೂ. ಏರಿಕೆ!
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಹೊಸ ಲುಕ್ʼನಲ್ಲಿ ಭಾರತದ ನಂಬರ್ 1 ಬೈಕ್; ಯಾವುದು?, ಬೆಲೆ ಎಷ್ಟು?












