ಎನ್. ಆರ್. ಪುರ : (ನ್ಯೂಸ್ ಮಲ್ನಾಡ್ ವರದಿ) ಮಂಗನ ಕಾಯಿಲೆಗೆ ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ!; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಎನ್. ಆರ್. ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜೊತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ ಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಗ್ರಾಮೀಣ ಪ್ರದೇಶಗಳಿಗೆ ಇ-ಖಾತಾಕ್ಕೆ ಹೊಸ ನಿರ್ಧಾರ!; ಏನದು? ಇಲ್ಲಿದೆ ನೋಡಿ
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಆರ್ಭಟ!; ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್?












