ಕಡೂರು: (ನ್ಯೂಸ್ ಮಲ್ನಾಡ್ ವರದಿ) ಹಾವು ಕಚ್ಚಿದ ಪರಿಣಾಮ ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ಸಂಭವಿಸಿದೆ. ಛತ್ತೀಸ್ಗಢ ಮೂಲದ ಜಾಲ್ ಬಾಯಿ ಸಿಧಾರ್ (42) ಮೃತ ಮಹಿಳೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಅವರು ತಮ್ಮ ಕುಟುಂಬದೊಂದಿಗೆ ಕಳೆದ ಕೆಲವು ದಿನಗಳಿಂದ AKC ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಮಲಗಿದ್ದ ವೇಳೆ ಮಹಿಳೆಯ ಕಾಲಿಗೆ ಹಾವು ಕಚ್ಚಿದೆ. ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಘಟನೆ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!













