ಕಳಸ: (ನ್ಯೂಸ್ ಮಲ್ನಾಡ್ ವರದಿ) ನಿರ್ಮಾಣ ಹಂತದ ಕಟ್ಟಡದಲ್ಲಿ ವಿದ್ಯುತ್ ತಗುಲಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸುಭಾನ್ ಸಿಂಗ್ ಸರ್ದಾರ್(29) ವಿದ್ಯುತ್ ತಗುಲಿ ಮೃತಪಟ್ಟ ಕಾರ್ಮಿಕ.
ಇದನ್ನೂ ಓದಿ: ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ!; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಮುಖ್ಯ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಅಪಾರ್ಟ್ಮೆಂಟಿನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕನಿಗೆ ಕಾಮಗಾರಿ ನಡೆಸುತ್ತಿರುವಾಗ ವಿದ್ಯುತ್ ತಗುಲಿದೆ. ಕೂಡಲೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರೊಳಗೆ ಕಾರ್ಮಿಕ ಮೃತಪಟ್ಟಿದ್ದ.
ಇದನ್ನೂ ಓದಿ: ಗ್ರಾಮೀಣ ಪ್ರದೇಶಗಳಿಗೆ ಇ-ಖಾತಾಕ್ಕೆ ಹೊಸ ನಿರ್ಧಾರ!; ಏನದು? ಇಲ್ಲಿದೆ ನೋಡಿ
ಈ ಕುರಿತು ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಆರ್ಭಟ!; ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್?












