ಕಳಸ: (ನ್ಯೂಸ್ ಮಲ್ನಾಡ್ ವರದಿ) ಕಾಫಿತೋಟದಲ್ಲಿ ಮರಗಸಿ ಮಾಡುವಾಗ ಮರದಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ನಡೆದಿದೆ. ತರೀಕೆರೆ ಮೂಲದ ಮಂಜುನಾಥ್ (53) ಮೃತ ಕಾರ್ಮಿಕ.
ಜೀವನೋಪಾಯಕ್ಕಾಗಿ ಕಳಸದಲ್ಲಿ ಬಂದು ನೆಲೆಸಿದ್ದ ಮಂಜುನಾಥ್. ಇಲ್ಲಿನ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಮರಗಸಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತೀವ್ರವಾಗಿ ತಲೆಗೆ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕಳಸ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಕೊಂಡಿದ್ದಾರೆ.












