ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಸಿಲ್ವರ್ ಮರ ಕಡಿಯುವ ವೇಳೆ ಕಾರ್ಮಿಕನ ಮೇಲೆ ಮರ ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ವರ್ತೆಗುಂಡಿ ಗ್ರಾಮದ ಮುರುಗ (41) ಮೃತ ದುರ್ದೈವಿ.
ಇದನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆʼ

ಲಿಂಗದಹಳ್ಳಿ ಸಮೀಪದ ಕಾಫಿ ತೋಟವೊಂದರಲ್ಲಿ ಸಿಲ್ವರ್ ಮರ ಕಡಿಯುವಾಗ ಅಚಾನಕ್ ಮರ ಮುರುಗ ಅವರ ಮೈಮೇಲೆ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಆಂಬುಲೆನ್ಸ್ ಮೂಲಕ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ












