ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕೊಳವೆ ಬಾವಿ ಸ್ವಚ್ಛಗೊಳಿಸುವ ವೇಳೆ ಆಯತಪ್ಪಿ ಕಾರ್ಮಿಕನೊಬ್ಬ ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕವಡಕಟ್ಟೆ ಗ್ರಾಮದ ಸರ್ಕಾರಿ ಶಾಲೆಯ ಮುಂಭಾಗದಲ್ಲಿ ನಡೆದಿದೆ.
ವಿಶ್ವನಾಥ್ ಎಂಬ ಕಾರ್ಮಿಕ ಬಾವಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಸುರಕ್ಷಿತವಾಗಿ ಮೇಲಕ್ಕೆ ಕರೆತಂದರು.

ಬಾವಿಗೆ ಬಿದ್ದ ರಭಸಕ್ಕೆ ವಿಶ್ವನಾಥ್ಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಚಿಕಿತ್ಸೆಗಾಗಿ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.












