ಬೀರೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಲೈನ್ʼಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಬೀರೂರು ಕುಡ್ಲೂರು ಗ್ರಾಮದಲ್ಲಿ ನಡೆದಿದೆ. ಪ್ರದೀಪ (36) ಮೃತಪಟ್ಟ ಯುವ ರೈತ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ

ಸ್ವಂತ ತೋಟದಲ್ಲಿ ಪ್ರದೀಪ ಅಲ್ಯುಮಿನಿಯಂನ ದೋಟಿಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ಪಕ್ಕದಲ್ಲಿದ್ದ ವಿದ್ಯುತ್ ಲೈನ್ ಗೆ ದೋಟಿ ತಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ












