ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ. ವಿಘ್ನೇಶ್ (18) ಆತ್ಮಹತ್ಯೆ ಮಾಡಿಕೊಂಡ ಯುವಕ.
ಇದನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!

ಮೃತ ಬಾಲಕ ಕೊಪ್ಪ ಪಟ್ಟಣದ ಐಟಿಐ ಕಾಲೇಜಿನಲ್ಲಿ ಮೊದಲ ವರ್ಷದ ಐಟಿಐ ಓದುತ್ತಿದ್ದ. ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್
ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಹಾಗಾಗಿ ಆಗಾಗ ಆಸ್ಪತ್ರೆಗೆ ಹೋಗಿ ಬರುತ್ತಿದ್ದ. ಸದಾ ಆಸ್ಪತ್ರೆಗೆ ಹೋಗಬೇಕು ಎಂದು ಬೇಜಾರಾಗಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ
ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!












