ಹೊಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಕುಂಬಾರ ಬೀದಿಯಲ್ಲಿನ ಮನೆಯೊಂದರಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟ ಘಟನೆ ಮೇ.8ರ ಶುಕ್ರವಾರ ಸಂಜೆ ನಡೆದಿದೆ. ಚೇತನ್ (28) ಸಾವನ್ನಪ್ಪಿದ ಯುವಕ.
ಮನೆ ರಿಪೇರಿ ಕೆಲಸ ಮಾಡುತ್ತಿದ್ದಾಗ ಗಾರೆ ಕೆಲಸ ಮಾಡುವವರಿಗೆ ಬಾವಿಯಿಂದ ಪಂಪ್ ಮೂಲಕ ನೀರೆತ್ತಲು ವಿದ್ಯುತ್ ಸಾಕೆಟ್‌ಗೆ ವೈರ್ ಹಾಕಲು ಹೋಗಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಚೇತನ್ ಅಸ್ವಸ್ಥನಾಗಿದ್ದ.

ತಕ್ಷಣ ಆತನನ್ನು ಇಲ್ಲಿನ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಅಷ್ಟರಲ್ಲಿ ಆಸುನೀಗಿರುವುದಾಗಿ ವೈದ್ಯರು ಧೃಡಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

















