ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಭದ್ರಾ ನದಿಯಲ್ಲಿ ಈಜಲು ಹೋಗಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಗಡಿಗೇಶ್ವರದಲ್ಲಿ ನಡೆದಿದೆ. ಜಲಾಲ್ (25) ಮೃತಪಟ್ಟ ಯುವಕ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ!; ಈ ದಾಖಲೆ ಕಡ್ಡಾಯ

ಬಾಳೆಹೊನ್ನೂರಿನ ಭದ್ರಾ ನದಿಗೆ ನಿನ್ನೆ ಸಂಜೆ ಮೂವರು ಸ್ನೇಹಿತರು ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿದ್ದು ಸ್ನೇಹಿತರು ಆತನನ್ನು ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಶವಕ್ಕಾಗಿ ತೀವ್ರ ಶೋಧ ನಡೆಸಿದ್ದರೂ ಸಂಜೆವರೆಗೂ ಶವ ಪತ್ತೆಯಾಗದೆ ಹುಡುಕಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಇಂದು ಮುಳುಗು ತಜ್ಞರು ಮತ್ತು ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ ಪುನರಾರಂಭಗೊಂಡಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಜಾಬ್ ಆಫರ್; 10th ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ: ಒಂದೇ ಚಾರ್ಜ್ನಲ್ಲಿ 320 ಕಿ.ಮೀ. ಪ್ರಯಾಣ; ಮತ್ತೊಂದು ಹೊಸ ಸ್ಕೂಟರ್ ಅನಾವರಣ












