
ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ತೋಟಕ್ಕೆ ನೀರು ಹರಿಸಲು ಹೋದಾಗ ವಿದ್ಯುತ್ ಸ್ಪರ್ಶದಿಂದ ಯುವಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (25) ಮೃತ ಯುವಕ.
ಇದನ್ನೂ ಓದಿ: ಈ ಕುಟುಂಬಗಳಿಗೆ ಎಲ್ಪಿಜಿ ಗ್ಯಾಸ್ ಸಿಗಲ್ಲ; ಸರ್ಕಾರದ ಹೊಸ ನಿಯಮ

ಬೇಸಿಗೆ ವೇಳೆಯಾಗಿದ್ದರಿಂದ ಬೋರ್ ವೆಲ್ ಮೋಟಾರ್ ಆನ್ ಮಾಡಿ ಅಡಿಕೆ ತೋಟಕ್ಕೆ ನೀರುಣಿಸಲು ಹೋದಾಗ ಈ ದುರ್ಘಟನೆ ನಡೆದಿದೆ. ತೋಟಕ್ಕೆ ಹೋದಾಗ ಮಗ ತುಂಬಾ ಹೊತ್ತಾದರೂ ಬಾರದನ್ನು ಕಂಡು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿದ್ದು ನೋಡಿದ್ದಾರೆ.

ಘಟನೆ ಸಂಬಂಧ ಅಜ್ಜಂಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ: LPG ಗ್ರಾಹಕರಿಗೆ ಮಹತ್ವದ ಸೂಚನೆ; ಆಧಾರ್ ಇ ಕೆವೈಸಿ ಮಾಡದಿದ್ರೆ ಸಿಗಲ್ಲ ಸಿಲಿಂಡರ್ !













