ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಹೃದಯಾಘಾತದಿಂದ ತೆಂಗಿನಕಾಯಿ ವ್ಯಾಪಾರಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವನಿ ಗ್ರಾಮದಲ್ಲಿ ನಡೆದಿದೆ. ಹರೀಶ್ (29) ಮೃತ ಯುವಕ.
ಇದನ್ನೂ ಓದಿ: IBPS PO ನಲ್ಲಿ 5208 ಹುದ್ದೆಗಳ ನೇಮಕ; ಆಕರ್ಷಕ ಸಂಬಳ

ತೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದ ಹರೀಶ್, ನಿನ್ನೆ ಬೆಳಗಿನ ಜಾವ 2.30ಕ್ಕೆ ವಾಂತಿ ಮಾಡಿಕೊಂಡಿದ್ದ ಬಳಿಕ ಗ್ಯಾಸ್ಟ್ರಿಕ್ ಎಂದು ಮಾತ್ರೆ ನುಂಗಿಸಿ ಮಲಗಿಸಿದ್ದ ಮನೆಯವರು 3.30ಕ್ಕೆ ಮತ್ತೆ ವಾಂತಿಯಾಗಿ ಕುಸಿದು ಬಿದ್ದಿದ. ಅಜ್ಜಂಪುರ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದ.
ಹರೀಶ್ ಅವಿವಾಹಿತನಾಗಿದ್ದು, ತೆಂಗಿನಕಾಯಿ ವ್ಯಾಪಾರದ ಜೊತೆ ತೋಟ ನೋಡಿಕೊಂಡಿದ್ದ.
ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮರ ಕಡಿಯಲು ನಿಯಮ ಸರಳೀಕರಣ












