
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದಲ್ಲಿ ಸಂಭವಿಸಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಕಟ್ಟಿನಮನೆ ಖಾಸಗಿ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ರಫೀಕ್ ಮೃತಪಟ್ಟ ಯುವಕ. ಮೂಲತಃ ಅಸ್ಸಾಂ ರಾಜ್ಯದ ನಿವಾಸಿಯಾಗಿರುವ ರಫೀಕ್, ಜೀವನೋಪಾಯಕ್ಕಾಗಿ ಇಲ್ಲಿನ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಯೂಮಿನಿಯಂ ಏಣಿ ಹತ್ತಿ ಕಾಳುಮೆಣಸು ಕುಯ್ಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾಹಿತಿಗಳ ಪ್ರಕಾರ, ರಫೀಕ್ ಏಣಿ ಹತ್ತಿ ಕಾಳುಮೆಣಸು ಕುಯ್ಯುತ್ತಿರುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ಸ್ಪರ್ಶವಾಗಿದ್ದು, ಶಾಕ್‌ನಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














