ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಬೈಲು ಗ್ರಾಮದ ಕನಗೇರಿಯಲ್ಲಿ ಶನಿವಾರ ವಾಸದ ಮನೆಯ ಗೋಡೆ ಕುಸಿದು ಬಿದ್ದು, ಯುವಕನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಡಗಬೈಲು ಗ್ರಾಮದ ಕನಗೇರಿ ನಿವಾಸಿ ಸತೀಶ್ ಅವರ ಪುತ್ರ ಪೂಜಿತ್ (17) ಅವರ ಮೇಲೆ ಗೋಡೆ ಬಿದ್ದು ಅಸ್ವಸ್ಥರಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಶಾಸಕ ಟಿ.ಡಿ. ರಾಜೇಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.















