ಕಡೂರು: ಯುವಕನಿಗೆ ವಿದ್ಯುತ್ ಶಾಕ್: ಮೆಸ್ಕಾಂ ನಿರ್ಲಕ್ಷ್ಯ, ಜೆಇ, ಲೈನ್‌ಮ್ಯಾನ್ ವಿರುದ್ಧ ಪ್ರಕರಣ ದಾಖಲು

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣ ವ್ಯಾಪ್ತಿಯ ಎಸ್‌.ಜಿ.ಕೊಪ್ಪಲಿನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಎಸ್‌.ಜಿ.ಕೊಪ್ಪಲು ನಿವಾಸಿ ಓಬಳೇಶ್ ಅವರ ಪುತ್ರ ಸಚಿನ್ ಗಾಯಗೊಂಡ ಯುವಕ. ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಮೇ 22ರಂದು ಮಧ್ಯಾಹ್ನ ಸಚಿನ್ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ವೇಳೆ, ವಿದ್ಯುತ್ ಕಂಬದಿಂದ ಕಿತ್ತುಬಿದ್ದಿದ್ದ ಅಪಾಯಕಾರಿ ಗೈ ವೈರ್‌ (GI wire) ಆಕಸ್ಮಿಕವಾಗಿ ತಗುಲಿದೆ. ತಂತಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಪರಿಣಾಮ ಸಚಿನ್‌ಗೆ ತೀವ್ರ ಶಾಕ್ ತಗುಲಿ ಕೈ, ಎದೆ, ಹೊಟ್ಟೆ ಹಾಗೂ ಕಾಲಿನ ಭಾಗಗಳಿಗೆ ಗಂಭೀರ ಗಾಯಗಳಾಗಿವೆ.

ಯುವಕನ ಕಿರುಚಾಟ ಕೇಳಿ ಸ್ಥಳಕ್ಕೆ ಧಾವಿಸಿದ ವಸಂತಕುಮಾರ್ ತಕ್ಷಣವೇ ತಂದೆ ಓಬಳೇಶ್ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಗಾಯಾಳುವನ್ನು ಬೈಕ್‌ನಲ್ಲಿ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.

ಈ ಅವಘಡಕ್ಕೆ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ದುರಂತಕ್ಕೆ ಕಾರಣರಾದ ಸಖರಾಯಪಟ್ಟಣದ ಜೆಇ ಹಾಗೂ ಲೈನ್‌ಮ್ಯಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಓಬಳೇಶ್ ದೂರು ನೀಡಿದ್ದು, ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.