ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ, ಆಕೆಯ ಖಾಸಗಿ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಕಳೆದ ಮೂರು ವರ್ಷಗಳಿಂದ ಸ್ನೇಹದಲ್ಲಿದ್ದ ಯುವಕ, ಪ್ರೇಮದ ನಾಟಕವಾಡಿ ಯುವತಿಯಿಂದ ಖಾಸಗಿ ಫೋಟೋಗಳನ್ನು ಪಡೆದಿದ್ದನು. ನಂತರ ಇನ್ಸ್ಟಾಗ್ರಾಮ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಆ ಫೋಟೋಗಳನ್ನು ವೈರಲ್ ಮಾಡಿದ್ದಾನೆ. ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನನ್ವಯ ಶಿವಮೊಗ್ಗದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.














