ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅರವಿಂದ ನಗರ ಬಡಾವಣೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ನಾಗಾಲ್ಯಾಂಡ್ ಮೂಲದ ಲುನ್ಸುಲಾ (22) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಈಕೆ ನಗರದ ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅರವಿಂದ ನಗರದ ನಿವಾಸದಲ್ಲಿ ಲುನ್ಸುಲಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯುವತಿಯ ಸಾವಿಗೆ ಸಂಬಂಧಿಸಿದಂತೆ ರಾಜೇಶ್ ಹಾಗೂ ತೇಜಸ್ ಎಂಬುವವರ ಮೇಲೆ ಅನುಮಾನ ವ್ಯಕ್ತವಾಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ಲುನ್ಸುಲಾ ಅವರ ಪರ್ಸನಲ್ ಡೈರಿಯಲ್ಲಿ ಈ ಇಬ್ಬರ ಹೆಸರುಗಳು ಪತ್ತೆಯಾಗಿದ್ದು, ಅವರು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಘಟನಾ ಸ್ಥಳಕ್ಕೆ ಬಸವನಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿಯು ಘಟನೆಗೂ ಮುನ್ನ ಕಿವಿಶೆ ಕಿನಿಮಿ ಎಂಬುವವರ ಜೊತೆ ಸುಮಾರು ಅರ್ಧ ಗಂಟೆಗಳ ಕಾಲ ಮಾತನಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.













