ತರೀಕೆರೆ: ದರ್ಗಾದ ಮೇಲೆ ಯುವಕರ ಗುಂಪಿನಿಂದ ದಾಂಧಲೆ ಆರೋಪ

ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10 ಕ್ಕೂ ಅಧಿಕ ಬೈಕ್ ನಲ್ಲಿ ಬಂದಿರುವ ಯುವಕರ ಗುಂಪು, ದರ್ಗಾದ ಮೇಲಿನ ಗೋಪುರ ಹಾಗೂ ಧ್ವಜ ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಕಂಡ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಗುಂಪು ಕಾಲ್ಕಿತ್ತಿದೆ. ಭದ್ರಾವತಿ ಮೂಲದ ಯುವಕರ ಗುಂಪು ಎನ್ನಲಾಗುತ್ತಿದೆ. ಶಾಂತವೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ; ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಬಜರಂಗದಳ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ | 7 ಕಾರ್ಯಕರ್ತರ ವಿರುದ್ಧ FIR ದಾಖಲು

 

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಡೆದಿದೆ.

ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ದರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನು ತಡೆಯಲು ಹೋದ ಪೊಲೀಸರಿಗೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಏಕಾಏಕಿ ಪಟಾಕಿ ಹಚ್ಚಿದ್ದರಿಂದ ಕೆಲ ಪೊಲೀಸರಿಗೆ ಗಾಯವಾಗಿದೆ. ಹೀಗಾಗಿ ಹಲ್ಲೆಗೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ತುಡುಕೂರು ಮಂಜು, ಸುನಿಲ್ ಸೇರಿದಂತೆ 7 ಜನರ ಮೇಲೆ FIR ದಾಖಲಿಸಲಾಗಿದೆ.

ಇದನ್ನೂ ಓದಿ; ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ; ಮಲೆನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ

ಇನ್ನು ಈ ಶೋಭಾಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿ.ಟಿ ರವಿ ಅವರು ಭಾಗಿಯಾಗಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.