ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕೋರ್ಟ್ ಆವರಣದಲ್ಲೇ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ವರದಿಯಾಗಿದೆ.
ಇದನ್ನೂ ಓದಿ: ಈ ರೈತರಿಗೆ ಗುಡ್ ನ್ಯೂಸ್; ಈ ಯೋಜನೆಯಲ್ಲಿ ಸಿಗಲಿದೆ 10 ಸಾವಿರ; ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು? ಇಲ್ಲಿದೆ ಡಿಟೈಲ್ಸ್

ಕಡೂರು ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ನ್ಯಾಯ ಸಿಗದಿದ್ದಕ್ಕೆ ಮನನೊಂದ ಯುವಕ ಕೋರ್ಟ್ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮ ಜಾರಿ
ಮಲ್ಲಿಕಾರ್ಜುನ ಎಂಬುವವರು ಜಮೀನು ವಿವಾದವಾಗಿ ಕೋರ್ಟ್ ಗೆ ಬಂದಿದ್ದರು. ತಂದೆ ಮಾಡಿದ ಸಾಲದ ಸಲುವಾಗಿ, ಜಮೀನು ತಮಗೆ ಸಿಗಲೆಂದು ನ್ಯಾಯ ಕೇಳಲು ಕೋರ್ಟ್ ಗೆ ಬಂದಿದ್ದರು. ಆದರೆ ನ್ಯಾಯ ಸಿಗದ ಹಿನ್ನೆಲೆ ಮನನೊಂದು ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಹಾಸನದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.












