ಹಾಲುಗುಂದ (ಕೊಡಗು) : (ನ್ಯೂಸ್ ಮಲ್ನಾಡ್ ವರದಿ) ಸಮೀಪದ ಕೊಂಡಂಗೇರಿ ಗ್ರಾಮದ ಎಲಿಯಂಗಾಡ್‌ನಲ್ಲಿ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೊಹಮ್ಮದ್ ಅಲಿ (28) ಮೃತಪಟ್ಟ ಯುವಕ.
ಗ್ರಾಮ ಪಂಚಾಯಿತಿಗೆ ಸೇರಿದ ಕೆರೆಯ ಸಮೀಪ ಅಲಿ ಅವರ ಸ್ಕೂಟಿ ಅನಾಥವಾಗಿ ನಿಂತಿರುವುದನ್ನು ಕಂಡು ಅನುಮಾನಗೊಂಡ ಸ್ಥಳೀಯರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನೀರಿನಲ್ಲಿ ಟೋಪಿ ತೇಲುತ್ತಿರುವುದು ಕಂಡುಬಂದಿದೆ. ತಕ್ಷಣ ಪೊಲೀಸರು ಹಾಗೂ ಸ್ಥಳೀಯರ ನೆರವಿನಿಂದ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

















