ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ಸೇತುವೆ ಮೇಲಿನಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೇವರಾಜ್ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-25.10.2023

ಬುಧವಾರ ಬೆಳಗ್ಗೆ ಯುವಕ ಸೇತುವೆ ಮೇಲಿನಿಂದ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶವವನ್ನು ಮೇಲೆತ್ತಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಬೇಕಿದ್ದು, ಈತ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ.
Khandya Temple: ಹುಲಿ ಉಗುರು ಧರಿಸಿದ್ದ ಆರೋಪದಡಿ ದೇವಸ್ಥಾನದ ಅರ್ಚಕರಿಬ್ಬರ ಬಂಧನ
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಆರೋಪದ ಮೇಲೆ ದೇವಸ್ಥಾನದ ಪ್ರಧಾನ ಅರ್ಚಕರಿಬ್ಬರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯದಲ್ಲಿ ನಡೆದಿದೆ.
ಈ ಹಿಂದೆ ಇಬ್ಬರನ್ನು ಬಂಧಿಸಿದ್ದ ಅರಣ್ಯ ಇಲಾಖೆ
ಹುಲಿ ಉಗುರು ಧರಿಸಿದ್ದ ಆರೋಪದಡಿ ಮೂಡಿಗೆರೆ ತಾಲೂಕಿನ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದರು. ತಾಲೂಕಿನ ಬಿ.ಹೊಸಳ್ಳಿಯ ಕುಂಡ್ರ ನಿವಾಸಿ ಸತೀಶ್ ಮತ್ತು ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ರನ್ನು ಬಂಧಿಸಲಾಗಿತ್ತು.
ಹುಲಿ ಉಗುರು ಧರಿಸಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂಡಿಗೆರೆ ಕಡೆಯಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಸತೀಶ್ನನ್ನು ಚಿಕ್ಕಮಗಳೂರು ಸಮೀಪದ ಮತ್ತಾವರ ಅರಣ್ಯ ಮಾಹಿತಿ ಕೇಂದ್ರದ ಬಳಿ ತಡೆದು ಬಂಧಿಸಿದ್ದರು.
ಸತೀಶ್ ಕುತ್ತಿಗೆಗೆ ಧರಿಸಿದ್ದ ಬೆಳ್ಳಿ ಸರದಲ್ಲಿ ಹುಲಿ ಉಗುರು ಇರುವುದು ಪತ್ತೆಯಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಉಗುರನ್ನು ತನಗೆ ಮೂಡಿಗೆರೆ ತಾಲೂಕಿನ ಹುಲ್ಲೇ ಮನೆ ಕುಂದೂರು ನಿವಾಸಿ ರಂಜಿತ್ ನೀಡಿದ್ದು ಎಂದು ಮಾಹಿತಿ ನೀಡಿದ್ದನು. ನಂತರ ರಂಜಿತ್ನನ್ನು ಹುಲ್ಲೇ ಮನೆಯ ನಿವಾಸದಲ್ಲಿ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ವ್ಯಕ್ತಿಯೊಬ್ಬರು ದೂರು ನೀಡಿದ ಆಧಾರದ ಮೇರೆಗೆ ರಾಜರಾಜೇಶ್ವರಿ ನಗರದ ಬಳಿ ರಿಯಾಲಿಟಿ ಶೋ ನಡೆಯುತ್ತಿದ್ದ ಬಿಗ್ಬಾಸ್ ಮನೆಗೆ ಭಾನುವಾರ ರಾತ್ರಿ ತೆರಳಿದ್ದ ಅರಣ್ಯಾಧಿಕಾರಿಗಳು ಸಂತೋಷ್ ಅವರನ್ನು ವಶಕ್ಕೆ ಪಡೆದಿದ್ದರು. ಸದ್ಯ ವರ್ತೂರು ಸಂತೋಷ್ನನ್ನು ಅರಣ್ಯಾಧಿಕಾರಿಗಳು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ರಾಜ್ಯಾದ್ಯಂತ ಅರಣ್ಯ ಇಲಾಖೆ ಹುಲಿ ಉಗುರು ಧರಿಸಿದವರ ಮೇಲೆ ಕ್ರಮ ಕೈಗೊಳ್ಳಲು ಸಜ್ಜಾಗಿದೆ.












