ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ವಿಷ ಸೇವಿಸಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಜೀವಿತ್ (32) ಎಂಬ ಯುವಕನು ವಿಷ ಸೇವಿಸಿ ನಂತರ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.
ಘಟನೆಯ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳ, ಸ್ಥಳೀಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಬಣಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶವ ಹುಡುಕಾಟ ಹಾಗೂ ಪರಿಶೀಲನೆ ನಡೆಸಿ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)












