ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ಶಿಡ್ಲೆ ಸಮೀಪ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಮತ್ತೋರ್ವ ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಮೃತರನ್ನು ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಕೊಟ್ಟಿಗೆಹಾರ ನಿವಾಸಿ ಅಭಿಷೇಕ್ (26) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಂಕೇತ್ (18) ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಅಭಿಷೇಕ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಾಯಗೊಂಡ ಸಂಕೇತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.















