ಕಳಸ: ಜೀಪ್ ಸಮೇತ ನದಿಗೆ ಬಿದ್ದು ಯುವಕ ಸಾವು: ಪುತ್ರನ ದೇಹ ಮೇಲೆ ತರುವ ಮೊದಲೇ ತಾಯಿ ಆತ್ಮಹತ್ಯೆ

ಕಳಸ: (ನ್ಯೂಸ್ ಮಲ್ನಾಡ್ ವರದಿ) ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಗುರುವಾರ (ಜು.24) ಸಂಜೆ ನಡೆದಿದೆ.


ಇದನ್ನೂ ಓದಿ:  60% ಅಂಕ ಪಡೆದ ವಿದ್ಯಾರ್ಥಿಗಳಿಗೆ 50,000 ಸ್ಕಾಲರ್‌ ಶಿಪ್


ಮೃತರನ್ನ ರವಿಕಲಾ(48 )ಎಂದು ಗುರುತಿಸಲಾಗಿದೆ. ಮೃತ ರವಿಕಲಾ ಪುತ್ರ ಶಮಂತ್ (23) ಪಿಕಪ್ ಜೀಪಿನಲ್ಲಿ ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದನು.

ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಜೀಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದು ಶಮಂತ್ ಸಾವನ್ನಪ್ಪಿದ್ದನು.


ಇದನ್ನೂ ಓದಿ: ರಾಜ್ಯದ ರೈತರಿಗೆ ಎಚ್ಚರಿಕೆ; ಪಿಎಂ ಕಿಸಾನ್ ಹಣ 110 ಕೋಟಿ ವಂಚನೆ!


ಶಮಂತ್ ಹಲವು ದಿನಗಳಿಂದ ಪಿಕಪ್ ಜೀಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದು. ನಿನ್ನೆ (ಗುರುವಾರ) ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ್ದ. ಕಾಫಿ ತೋಟದಿಂದ ಕಾರ್ಮಿಕರನ್ನ ಕರೆತರುವಾಗ ಅಪಘಾತ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

ಮಲೆನಾಡಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಆದರೆ, ನಿನ್ನೆ ಸಂಜೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.


ಇದನ್ನೂ ಓದಿ: AI ಕ್ರಾಂತಿಗೆ ಹೆಜ್ಜೆ; ಯತಿಕಾರ್ಪ್‌ನಿಂದ 10,000 ಮಂದಿಗೆ 20,000 ಮೌಲ್ಯದ ಉಚಿತ AI ಶಿಕ್ಷಣ ಕಿಟ್


ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.