
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದೇವಿರಮ್ಮ ಬೆಟ್ಟದಿಂದ ಜಾರಿಬಿದ್ದು 21 ವರ್ಷದ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ತರೀಕೆರೆ ಮೂಲದ ದರ್ಶನ್ ಗಾಯಗೊಂಡ ಯುವಕ.
ದೇವಿರಮ್ಮ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದು ಸಂಜೆ ವಾಪಸ್ ಆಗುತ್ತಿದ್ದ ವೇಳೆ ಬೆಟ್ಟದ ತುದಿಯಿಂದ ಆಕಸ್ಮಿಕವಾಗಿ ಜಾರಿಬಿದ್ದಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ದರ್ಶನ್ ಅವರ ಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನನ್ನು ರಕ್ಷಿಸಿ, ಹೊತ್ತುಕೊಂಡು ಬೆಟ್ಟದಿಂದ ಕೆಳಕ್ಕೆ ತಂದಿದ್ದಾರೆ.

ಬಳಿಕ ಗಾಯಾಳು ದರ್ಶನ್ ಅವರನ್ನು ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.













